ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹೊಸ ವರ್ಷಾಚರಣೆಗೆಂದು ತಂದಿದ್ದ ಭಾರೀ ಪ್ರಮಾಣದ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಹೊಸ ವರ್ಷದ ಪಾರ್ಟಿಗೆ ಡ್ರಗ್ಸ್ ಸಪ್ಲೈ ಮಾಡಲು ಥೈಲ್ಯಾಂಡ್ ನಿಂದ ತರಿಸಿದ್ದ ಹೈಡ್ರೋ ಗಂಜಾವನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಮೂಲದ ರಕ್ಷಿತ್ ರಮೇಶ್ ಎಂಬಾತನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಈ ವ್ಯಕ್ತಿ ವಾಸಿಸುತ್ತಿದ್ದ ಸಂಪಿಗೆಹಳ್ಳಿ ಮನೆಯಲ್ಲಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಬೆಂಗಳೂರಿನ ಪಾರ್ಟಿಗಳಿಗೆ ಪೂರೈಕೆ ಮಾಡಲು ತರಿಸಿದ್ದ ಬರೋಬ್ಬರಿ 16 ಕೆಜಿ ಗಾಂಜಾ ಸೊಪ್ಪು ಮತ್ತು ಥೈಲ್ಯಾಂಡ್ ನಿಂದ ತರಿಸಿದ್ದ ಸುಮಾರು ಮೂರು ಕೆಜಿ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಎಂಡಿಎಂಎ, ಎಲ್ ಎಸ್ ಡಿ ಮತ್ತು ಚರಸ್ ಸೇರಿದಂತೆ ಸುಮಾರು 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಯಲಹಂಕ ನ್ಯೂಟೌನ್, ಗೋವಿಂದ ರಾಜನಗರ, ಕಾಮಾಕ್ಷಿ ಪಾಳ್ಯ, ಬಾಗಲೂರು, ಕೊಡಿಗೆಹಳ್ಳಿ, ಅಮೃತಹಳ್ಳಿ ಪೊಲೀಸರು ಸಹ ಗಾಂಜಾ ಮಾರಾಟ ಮಾಡುತ್ತಿದ್ದ 7 ಜನರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಈ ವೇಳೆ ಸುಮಾರು 40 ಲಕ್ಷ ರೂ. ಮೌಲ್ಯದ ಗಾಂಜಾ ಮತ್ತು ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.