ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕೊಳಗಾಗಿದ್ದ ನಟಿ ರನ್ಯಾ ರಾವ್ಗೆ ಬಿಗ್ ರಿಲೀಫ್ ಸಿಕಿದ್ದು, ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ ರನ್ಯಾ ರಾವ್ಗೆ ಬಿಗ್ ರಿಲೀಫ್ ಸಿಕ್ಕಿದೆ.
ಒಂದು ವರ್ಷ ಜೈಲು ವಾಸದ ಬಳಿಕ ಇದೀಗ ಜಾಮೀನು ಸಿಕ್ಕಿದ್ದು, ಇಂದು ಪರಪ್ಪನ ಅಗ್ರಹಾರದಿಂದ ರನ್ಯಾ ರಾವ್ ಬಿಡುಗಡೆ ಆಗಲಿದ್ದಾರೆ. 102 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ 2025 ಮಾರ್ಚ್ 3ರಂದು ನಟಿ ರನ್ಯಾ ರಾವ್ ಡಿಆರ್ಐ ಕೈಯಲ್ಲಿ ಲಾಕ್ ಆಗಿದ್ದರು. ಬಳಿಕ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.
ಬಳಿಕ ಹೈಕೋರ್ಟ್ ಏಕಸದಸ್ಯ ಪೀಠ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ ಕಾಫಿಪೋಸಾ ಕಾಯ್ದೆ ಸೆಕ್ಷನ್ 3(1) ಅಡಿ ಬಂಧನದ ಆದೇಶ ಹೊರಡಿಸಿತ್ತು. ಹೀಗಾಗಿ ರನ್ಯಾ ರಾವ್ಗೆ ಒಂದು ವರ್ಷ ಜಾಮೀನು ಸಿಕ್ಕಿರಲಿಲ್ಲ. ಇದೀಗ ಒಂದು ವರ್ಷ ಜೈಲು ವಾಸದ ಬಳಿಕ ಕೊನೆಗೂ ಜಾಮೀನು ಮಂಜೂರು ಮಾಡಲಾಗಿದೆ.
ಇದನ್ನೂ ಓದಿ : ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?



















