ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾ.ನಾಗಪ್ರಸನ್ನ ಅವರ ಪೀಠವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಇದರಿಂದ ತಾತ್ಕಾಲಿಕವಾಗಿ ಯಡಿಯೂರಪ್ಪ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.
ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಲಾಗಿತ್ತು. ಬಂಧನದ ಭೀತಿಯಲ್ಲಿದ್ದ ಕಾರಣ ಬಿಎಸ್ ವೈ ಅವರು ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಹೈಕೋರ್ಟ್ ಮೊರೆ ಹೋಗಿದ್ದರು. ಈಗ ಧಾರವಾಡ ಹೈಕೋರ್ಟ್ ಪೀಠವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ 2024ರ ಮಾರ್ಚ್ ನಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಹಾಗೆಯೇ, ಖುದ್ದು ಹಾಜರಾತಿಯಿಂದ ಯಡಿಯೂರಪ್ಪ ಅವರಿಗೆ ವಿನಾಯಿತಿ ನೀಡಲಾಗಿತ್ತು. ಯಡಿಯೂರಪ್ಪ ಅವರ ಪರವಾಗಿ ಸಿ.ವಿ.ನಾಗೇಶ್ ಹಾಗೂ ಪ್ರೊ.ರವಿವರ್ಮ ಅವರು ವಾದ ಮಂಡಿಸಿದ್ದರು.