ಬೆಂಗಳೂರು: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ(Krishnaiah Shetty) ಗೆ ಬಿಗ್ ರಿಲೀಫ್ ಸಿಕ್ಕಿದೆ.
ಬ್ಯಾಂಕ್ ಹಗರಣ (Bank Scam)ಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಹೈಕೋರ್ಟ್ (High Court) ನಿಂದ ರಿಲೀಫ್ ಸಿಕ್ಕಿದೆ. ಕೋರ್ಟ್ ವಿಧಿಸಿದ್ದ 3 ವರ್ಷ ಜೈಲು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ.
ಬ್ಯಾಂಕ್ ಹಗರಣದಲ್ಲಿ ಕೃಷ್ಣಯ್ಯ ಶೆಟ್ಟಿಗೆ ಕೆಳಹಂತದ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಕೆಳಹಂತದ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಕೃಷ್ಣಯ್ಯ ಶೆಟ್ಟಿಗೆ ಶಿಕ್ಷೆ ಅಮಾನತುಗೊಳಿಸಿ ದಂಡದ ಮೊತ್ತ ಠೇವಣಿ ಇಡಲು ಹೈಕೋರ್ಟ್ ಆದೇಶ ನೀಡಿದೆ.
2012ರಲ್ಲಿ ಬಾಲಾಜಿಕೃಪಾ ಎಂಟರ್‌ಪ್ರೈಸಸ್’ನ ಮಾಲೀಕ ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ, ಹಲವು ನೌಕರರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ 7.17 ಕೋಟಿ ರೂ. ಬ್ಯಾಂಕ್ ಸಾಲ ಪಡೆದಿದ್ದರು. ಆದರೆ, ಇಲ್ಲಿಯವರೆಗೆ 3.53 ಕೋಟಿ ರೂ. ಸಾಲ ತೀರಿಸಿಲ್ಲ ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ಗಂಭೀರವಾಗಿದ್ದರಿಂದಾಗಿ ಸಿಬಿಐ ತನಿಖೆಗೆ ವಹಿಸಲಾಗಿತ್ತು.