ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಅವರ ಶಸ್ತ್ರಾಸ್ತ್ರ ಪರವಾನಗಿ ಅಮಾನತುಗೊಳಿಸಿ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ನ್ಯಾಯಾಲಯ ಈಗ ತಡೆಯಾಜ್ಞೆ ನೀಡಿದೆ.
ದರ್ಶನ್ ಎದುರಿಸುತ್ತಿರುವ ಕ್ರಿಮಿನಲ್ ಆರೋಪಗಳ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅವರ ಗನ್ ಲೈಸೆನ್ಸ್ ಅನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಪೊಲೀಸರ ಈ ಕ್ರಮವನ್ನು ಪ್ರಶ್ನಿಸಿ ದರ್ಶನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು.
ದರ್ಶನ್ ಅವರು 2008ರಿಂದಲೂ ಅಧಿಕೃತವಾಗಿ ಶಸ್ತ್ರಾಸ್ತ್ರ ಪರವಾನಗಿ ಹೊಂದಿದ್ದಾರೆ. ಯಾವುದೇ ಕಾನೂನುಬಾಹಿರ ಚಟುವಟಿಕೆಗೆ ಅವರು ಶಸ್ತ್ರಾಸ್ತ್ರ ಬಳಸಿಲ್ಲ. ಕೇವಲ ಕ್ರಿಮಿನಲ್ ಪ್ರಕರಣ ದಾಖಲಾದ ತಕ್ಷಣ ಪರವಾನಗಿ ಅಮಾನತು ಮಾಡುವುದು ಸರಿಯಲ್ಲ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, ಪೊಲೀಸರ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡುವ ಮೂಲಕ ನಟ ದರ್ಶನ್ ಅವರಿಗೆ ರಿಲೀಫ್ ನೀಡಿದೆ.
ಇದನ್ನೂ ಓದಿ : ಸಾರ್ವಜನಿಕರೇ ‘ಕೃತಕ ಬಣ್ಣ’ ಬಳಿದ ಕಲ್ಲಂಗಡಿ, ಜ್ಯೂಸ್, ಐಸ್‌ಕ್ರೀಮ್ ಸೇವಿಸುವಾಗ ಎಚ್ಚರ | ಆರೋಗ್ಯ ಇಲಾಖೆ ಮಾಹಿತಿ



















