ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ (Belekeri Port Case) ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Congress MLA Satish Sail) ಸೇರಿದಂತೆ ಆರೋಪಿಗಳಿಗೆ ಜನಪ್ರತಿನಿಧಿಗಳ ಕೋರ್ಟ ಶಿಕ್ಷೆ ವಿಧಿಸಿತ್ತು. ಆದರೆ, ಈಗ ಹೈಕೋರ್ಟ್ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟಿದ್ದು, ಆರೋಪಿಗಳಿಗೆ ರಿಲೀಫ್ ಸಿಕ್ಕಂತಾಗಿದೆ.
ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತದಲ್ಲಿ ಶೇ.25 ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿದೆ. ದಂಡದ ಮೊತ್ತವನ್ನು 6 ವಾರಗಳಲ್ಲಿ ಠೇವಣಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿದೆ.
ಜನಪ್ರತಿನಿಧಿಗಳ ಕೋರ್ಟ್ ನೀಡಿದ ಆದೇಶವನ್ನು ರದ್ದು ಪಡಿಸುವಂತೆ ಸತೀಶ್ ಸೈಲ್ ಸೇರಿದಂತೆ ಇನ್ನಿತರ ಆರೋಪಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಈಗ ಕೋರ್ಟ್ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಆದೇಶ ಹೊರಡಿಸಿದೆ. ಹೀಗಾಗಿ ಆರೋಪಿಗಳು ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
6 ಪ್ರಕರಣದಲ್ಲಿ ದೋಷಿಯಾಗಿದ್ದ ಸತೀಶ್ ಸೈಲ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಮತ್ತು 44 ಕೋಟಿ ರೂ. ದಂಡ ವಿಧಿಸಿತ್ತು.