ಚಿತ್ರದುರ್ಗ: ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
ಇಂದು ಚಿತ್ರದುರ್ಗ ಕೋರ್ಟ್ನಲ್ಲಿ ನಡೆದ ವಿಚಾರಣೆಗೆಂದು ದಾವಣಗೆರೆ ವಿರಕ್ತ ಮಠದಿಂದ ಶ್ರೀಗಳು ನೇರವಾಗಿ ಕೋರ್ಟ್ ಗೆ ಆಗಮಿಸಿದ್ದರು. ಈ ಪ್ರಕರಣದಲ್ಲಿ A-1 ಮುರುಘಾ ಶ್ರೀ, A-2 ವಾರ್ಡನ್ ರಶ್ಮಿ, A-3 ಪರಮಶಿವಯ್ಯ ಆರೋಪಿಗಳಾಗಿದ್ದಾರೆ. ಮೊದಲ ಕೇಸ್ ನಲ್ಲಿ ಎರಡು ಪ್ರತ್ಯೇಕ ಜಾರ್ಜ್ ಶೀಟ್ ಸಲ್ಲಿಕೆಯಾಗಿತ್ತು.
2022ರ ಆಗಸ್ಟ್ 26 ರಂದು ಮೈಸೂರಿನ (Mysuru) ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 3 ವರ್ಷಗಳ ಸುದೀರ್ಘ ತನಿಖೆ ಬಳಿಕ ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದ ನ್ಯಾ.ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರಿದ್ದ ಪೀಠ ನಿರ್ದೋಷಿ ಅಂತ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಮೊದಲ ಪ್ರಕರಣ ಖುಲಾಸೆಯಾಗಿದೆ.
ಇದನ್ನೂ ಓದಿ : ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್



















