ಬೀದರ್ : ಬೀದರ್‌ನಲ್ಲಿ ಬೆಳ್ಳಂಬೆಳಿಗ್ಗೆ ಅಕ್ರಮ ದಂಧೆಕೋರರಿಗೆ ಬಿಗ್ ಶಾಕ್ ನೀಡಲಾಗಿದೆ. ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ವಿಶ್ವನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದ ಪಟ್ಟಾ ಜಮೀನಿನಲ್ಲಿ ಅನುಮತಿ ಪಡೆಯದೇ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಅಧಿಕಾರಿಗಳು 1 ಟ್ರಾಕ್ಟರ್ ಹಾಗೂ 2 ಟಿಲ್ಲರ್ ಯಂತ್ರ ವಶಪಡಿಸಿಕೊಂಡಿದ್ದಾರೆ.
ಕಳೆದ 5 ದಿನಗಳಿಂದ ನಿರಂತರವಾಗಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಯ ಅಡ್ಡೆಯ ಮೇಲೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದು, ಐದು ದಿನಗಳಲ್ಲಿ 3 ಲಾರಿ, 6 ಟ್ರ್ಯಾಕ್ಟರ್ ಮತ್ತು 6 ಟಿಲ್ಲರ್ ಯಂತ್ರ ವಶಪಡಿಸಿಕೊಂಡಿದ್ದಾರೆ.
ಬೀದರ್ ಜಿಲ್ಲೆಯ ಮನ್ನಳ್ಳಿ, ಕಾಡವಾದ, ಸಂಗೋಳಗಿ ತಾಂಡಾ, ಹಣದೂರ, ಮಲಚಾಪುರ, ಹಿನ್ನಾಕುಣಿ, ಚಿಟಗುಪ್ಪಾದಲ್ಲಿ ದಂಧೆಕೋರರು ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದರು. ಗಣಿ ಇಲಾಖೆ ಅಧಿಕಾರಿಗಳು ವಾಹನಗಳನ್ನ ಜಪ್ತಿ ಮಾಡಿ ಆಯಾ ಪೊಲೀಸ್ ಠಾಣೆಗಳಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕೋಗಿಲು ಲೇಔಟ್ ನಿರಾಶ್ರಿತರ ಮನೆ ಹಂಚಿಕೆಗೆ ಲಾಜಿಕಲ್ ಎಂಡ್ ಸಿಕ್ತಾ?



















