ಯಾದಗಿರಿ : ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ತೋರಿದ ಪ್ರಕರಣದಲ್ಲಿ ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ತಮ್ಮ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಇಂದು ಈ ಅರ್ಜಿ ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ, ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು (ಮಾರ್ಚ್ 09) ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ವೈದ್ಯೆ



















