ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ (KMVSTDCL) ಕೋಟ್ಯಂತರ ರೂಪಾಯಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ 30 ಆರೋಪಿಗಳ ವಿರುದ್ಧ ಸಿಬಿಐ ಇಂದು ನ್ಯಾಯಲಯಕ್ಕೆ ಬೃಹತ್ ದೋಷಾರೋಪ ಪಟ್ಟಿ ಸಲ್ಲಿಸಿದೆ. ನಿಗಮದ ಹಣ ವರ್ಗಾವಣೆಯಲ್ಲಿ ಮಾಜಿ ಸಚಿವರ ಕುಟುಂಬಸ್ಥರು ಹಾಗೂ ಅವರ ಆಪ್ತರು ಶಾಮೀಲಾಗಿರುವುದು ಸಾಬೀತಾಗಿದೆ ಎಂದು ಸಿಬಿಐ ಸ್ಪಷ್ಟಪಡಿಸಿದೆ.
ವಾಲ್ಮೀಕಿ ನಿಗಮ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (KGTTI) ಈ ಮೂರೂ ಘಟಕಗಳಲ್ಲಿ ನಡೆದಿರುವ ಆರ್ಥಿಕ ದುರುಪಯೋಗದ ತನಿಖೆ ಪೂರ್ಣಗೊಳಿಸಲಾಗಿದ್ದು, ಮೂರರಲ್ಲೂ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ ಎಂದು ಸಿಬಿಐ ತಿಳಿಸಿದೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ಎಂ.ಜಿ. ರೋಡ್ ಶಾಖೆಯ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಹೈಕೋರ್ಟ್ ಉಸ್ತುವಾರಿಯಲ್ಲಿ ಈ ತನಿಖೆ ನಡೆದಿತ್ತು. ನಂತರ ಹೈಕೋರ್ಟ್ ಆದೇಶದ ಮೇರೆಗೆ ತನಿಖೆಯನ್ನು ಇಲಾಖೆಯ ಇತರೆ ಎರಡು ಘಟಕಗಳಿಗೂ ವಿಸ್ತರಿಸಲಾಗಿತ್ತು.
ಇದನ್ನೂ ಓದಿ : ಸಿಎಂ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ; ಬೆಂಗಳೂರಿನಾದ್ಯಂತ ಡಿಕೆಶಿ ಫ್ಲೆಕ್ಸ್, ಕಟೌಟ್ಗಳ ದರ್ಬಾರ್!


















