ಬೆಂಗಳೂರು : ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪ್ರಕರಣವು ಇದೀಗ ಮಹತ್ವದ ತಿರುವನ್ನು ಪಡೆದುಕೊಂಡಿದೆ. ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ ಮಹಿಳೆಯು ಇದೀಗ ಯು-ಟರ್ನ್ ಹೊಡೆದಿದ್ದಾರೆ.
ವಿಡಿಯೋ ರಿಲೀಸ್ ಮಾಡಿರುವ ಅವರು, ತಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ವಿಡಿಯೋ ಮೂಲಕ ಸ್ಪಷ್ಟಪಡಿಸಿದ್ದಾರೆ.
ನನ್ನ ಹೆಸರಿನಲ್ಲಿ ಯಾರೋ ದೂರು ದಾಖಲಿಸಿದ್ದಾರೆ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಅಲ್ಲದೆ ಏಪ್ರಿಲ್ 6ರಂದು ದೂರು ನೀಡಿರುವುದು ಯಾರು ಅಂತಾ ಗೊತ್ತಿಲ್ಲ. ಅದೊಂದು ಸುಳ್ಳು ದೂರು, ಆ ದೂರನ್ನು ಯಾರೂ ನಂಬಬೇಡಿ. ನಾನು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಾಲ್ಕು ದಿನಗಳ ಬಳಿಕ ಬಂದು ಎಲ್ಲವನ್ನು ವಿವರವಾಗಿ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಹಿನ್ನೆಲೆ :
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಹೋರಾಟದ ನೇತೃತ್ವವಹಿಸಿಕೊಂಡಿದ್ದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆ ದೂರು ನೀಡಿದ್ದು, ಸ್ವತಃ ಸ್ವಾಮೀಜಿ ನನ್ನ ಖಾಸಗಿ ವಿಡಿಯೋ ಮಾಡಿಕೊಂಡು, ಲೈಂಗಿಕವಾಗಿ ಸಹಕರಿಸುವಂತೆ ಮತ್ತು ಪ್ರತಿನಿತ್ಯ ರಾತ್ರಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ತಮ್ಮ ವಿರುದ್ಧ ಗಂಭೀರ ಆರೋಪ ಮಾಡಿದ್ದ ಮಹಿಳೆ ವಿರುದ್ಧ ಸ್ವಾಮೀಜಿ ಪ್ರತಿದೂರು ದಾಖಲಿಸುತ್ತಿದ್ದಂತೆ ಮಹಿಳೆ ನಾಪತ್ತೆಯಾಗಿದ್ದರು. ಪೊಲೀಸರು, ಮಹಿಳೆಯನ್ನು ಸಂಪರ್ಕಿಸಲು ಎಷ್ಟೇ ಯತ್ನ ಮಾಡಿದ್ರೂ ಸಂತ್ರಸ್ಥೆ ಸಂಪರ್ಕಕ್ಕೆ ಸಿಗುತ್ತಿಲ್ಲ.
ಇದನ್ನೂ ಓದಿ : ಜೇಮ್ಸ್ ಬಾಂಡ್ ಸಿನಿಮಾದಂತೆ ಕ್ಷಣಾರ್ಧದಲ್ಲಿ ನಂಬರ್ ಪ್ಲೇಟ್ ಬದಲಿಸಿದ ಕುಡುಕ ವೈದ್ಯ : ಪೊಲೀಸರು ಶಾಕ್!


















