ಮುಂಬಯಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಬಹುತೇಕ ಹೊರ ಬಿದ್ದಿದ್ದು, ಬಿಜೆಪಿ ನೇತೃತ್ವದ ಮೈತ್ರಿ ಭರ್ಜರಿ ಜಯ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಗೆಲ್ಲುತ್ತದೆ. ಒಗ್ಗೂಡಿ ನಾವು ಇನ್ನೂ ಎತ್ತರಕ್ಕೆ ಏರುತ್ತೇವೆ. ಎನ್‌ಡಿಎಗೆ ಐತಿಹಾಸಿಕ ಜನಾದೇಶಕ್ಕಾಗಿ ಮಹಾರಾಷ್ಟ್ರದ ನನ್ನ ಸಹೋದರಿಯರು ಮತ್ತು ಸಹೋದರರಿಗೆ ವಿಶೇಷವಾಗಿ ಮಹಾರಾಷ್ಟ್ರ ರಾಜ್ಯದ ಯುವಕರು ಮತ್ತು ಮಹಿಳೆಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ನಮ್ಮ ಮೈತ್ರಿಯು ಮಹಾರಾಷ್ಟ್ರದ ಪ್ರಗತಿಗೆ ಶ್ರಮಿಸುತ್ತದೆ ಎಂದು ನಾನು ಜನರಿಗೆ ಭರವಸೆ ನೀಡುತ್ತೇನೆ. ಜೈ ಮಹಾರಾಷ್ಟ್ರ!” ಎಂದು ಬರೆದುಕೊಂಡು ಕೃತಜ್ಞತೆ ಸಲ್ಲಿಸಿದ್ದಾರೆ.
ಅಲ್ಲದೇ, ಜಾರ್ಖಂಡ್ ಮತದಾರರಿಗು ಕೂಡ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.