ಬೆಂಗಳೂರು: ಬಿಗ್ ಬಾಸ್ ಮನೆಗೆ ಬೀಗ ಜಡಿದ ಬೆನ್ನಲ್ಲೇ ಜಾಲಿವುಡ್ ಸ್ಟುಡಿಯೋ ಹೈಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿದೆ.
ಕೋರ್ಟ್ ಈ ಅರ್ಜಿಯನ್ನು ಪುರಸ್ಕರಿಸಿದ್ದು ನ್ಯಾ.ಸೂರಜ್ ಗೋವಿಂದರಾಜ್ ಅವರ ಪೀಠ ಮಧ್ಯಾಹ್ನ 2:30ಕ್ಕೆ ವಿಚಾರಣೆ ನಡೆಸಲಿದೆ.
ಬಿಗ್ ಬಾಸ್ ಕಾರ್ಯಕ್ರಮ ಶುರುವಾಗುವ ಸಮಯದಲ್ಲೇ ನಮ್ಮ ಅಹವಾಲು ಆಲಿಸದೇ ತರಾತುರಿಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 2 ಸಾವಿರ ಮಂದಿ ನೇರವಾಗಿ ಅಥವಾ ಪರೋಕ್ಷವಾಗಿ ತೊಡಗಿಸಿಕೊಂಡಿದ್ದಾರೆ. ವ್ಯವಹಾರಕ್ಕೆ ಹಾನಿ ಮಾಡುವ ಉದ್ದೇಶದಿಂದಲೇ ಈ ಆದೇಶ ಹೊರಡಿಸಲಾಗಿದೆ. ಹೀಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶಕ್ಕೆ ತಡೆ ನೀಡಬೇಕು. ಅಷ್ಟೇ ಅಲ್ಲದೇ ಬೇರೆ ಯಾವುದೇ ಸಂಸ್ಥೆ ಹೊರಡಿಸುವ ಆದೇಶಕ್ಕೂ ತಡೆ ನೀಡಬೇಕೆಂದು ಕೋರಿ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಬಿಗ್ ಬಾಸ್ ಕಡೆಯಿಂದ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ. ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್‌ಬಾಸ್ ನಡೆಯುತ್ತಿರುವ ಕಾರಣ ವೇಲ್ಸ್ ಸ್ಟುಡಿಯೋ ಹೈಕೋರ್ಟ್ ಮೊರೆ ಹೋಗಿದೆ.