ಬೆಂಗಳೂರು : ಬಿಗ್ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟ ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ ಕುಮಾರ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಅಪ್ಪು ಸ್ಮಾರಕದ ಮುಂದೆ ಗೆದ್ದ ಟ್ರೋಫಿಯನ್ನಿಟ್ಟು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಿಗ್ ಬಾಸ್ ಗೆಲುವಿನ ನಂತರ ಗಿಲ್ಲಿ ಈಗಾಗಲೇ ನಟ ಶಿವರಾಜ್ ಕುಮಾರ್, ಸುದೀಪ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದು, ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಅಪ್ಪು ಅಭಿಮಾನಿಗಳು ಹಾಗೂ ಗಿಲ್ಲಿ ಅಭಿಮಾನಿಗಳು ಈ ಭೇಟಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ : ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ



















