ಶಿವಮೊಗ್ಗ: ಬಿಹಾರ ಚುನಾವಣೆಯಲ್ಲಿಎನ್‌ಡಿಎ ಪಕ್ಷಕ್ಕೆ ನಿರೀಕ್ಷೆಗೂ ಮೀರಿದ ಫಲಿತಾಂಶ ಬಂದಿದೆ. ಮೋದಿ ಮತ್ತು ಅಮಿತ್ ಷಾ ಅವರ ಯೋಜನೆ ಯಶಸ್ಸು ಕಂಡಿದೆ. ಈ ಮೂಲಕ ಮೋದಿಯವರ ನಾಯಕತ್ವಕ್ಕೆ ಮೆಚ್ಚುಗೆ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬಿಹಾರ ಚುನಾವಣಾ ಫಲಿತಾಂಶ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಪ್ರಧಾನಿ ಮೋದಿ ಹಾಗೂ ನಿತೀಶ್ ಕುಮಾರ್, ಅಮಿತ್ ಶಾ ಅವರ ನೇತೃತ್ವ ಈ ದೊಡ್ಡ ಗೆಲುವನ್ನು ತಂದುಕೊಟ್ಟಿದೆ. ಅವರ ನೇತೃತ್ವವನ್ನು ಮೆಚ್ಚಿ ಜನರು ಎಷ್ಟು ದೊಡ್ಡ ಗೆಲುವನ್ನು ಕೊಟ್ಟಿದ್ದಾರೆ ಅವರಿಗೆಲ್ಲರಿಗೂ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಬಿಹಾರ ಗೆಲುವಿನ ಪರಿಣಾಮ ಮುಂಬರುವ ದಿನಗಳಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ದೊಡ್ಡ ಸಾಧನೆ ಮಾಡಲಿದೆ. ಕರ್ನಾಟಕದಲ್ಲಿ ಇದೇ ರೀತಿ ದೊಡ್ಡ ಗೆಲುವನ್ನು ಕಾಣಬೇಕು ಎಂದು ಕೆಲಸ ಮಾಡುತ್ತಿದ್ದೇವೆ ನಮ್ಮ ಪ್ರಯತ್ನವನ್ನು ನಾವು ಮುಂದುವರಿಸುತ್ತಿದ್ದೇವೆ. ಬಿಹಾರದಲ್ಲಿ ಸಿಎಂ ಆಯ್ಕೆ ವಿಚಾರದ ಬಗ್ಗೆ ಅಮಿತ್ ಶಾ ಹಾಗೂ ನರೇಂದ್ರ ಮೋದಿಯವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದೇ ಅಂತಿಮ ಆ ವಿಚಾರದಲ್ಲಿ ನಾನು ತಲೆ ಹಾಕುವುದಿಲ್ಲ ಎಂದು ಹೇಳಿದ್ದಾರೆ.
ಮೋದಿಯವರು ಅಮಿತ್ ಶಾ ಅವರು ಹಾಗೂ ನಿತೀಶ್ ಕುಮಾರ್ ಅವರ ಮೇಲೆ ಇರುವ ಗೌರವ ಈ ಫಲಿತಾಂಶಕ್ಕೆ ಕಾರಣ ಬಹಳ ದೊಡ್ಡ ಗೆಲುವಾಗಿದ್ದರಿಂದ ಬಿಹಾರದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯ ರಾಜಕರಣದ ಬಗ್ಗೆ ನಾನೂ ಈಗ ಮಾತನಾಡುವುದಿಲ್ಲ. ಕಬ್ಬಿನ ಬೆಳೆಗಾರರ ವಿಚಾರದಲ್ಲಿ ಒಂದು ನಿರ್ಧಾರಕ್ಕೆ ಬರುತ್ತಿದ್ದೇವೆ ಎಲ್ಲ ಸಮಸ್ಯೆಗಳು ಪರಿಹಾರ ಆಗಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ, ಸಚಿವ ಈಶ್ವರ ಖಂಡ್ರೆ ಸೇರಿ ಗಣ್ಯರಿಂದ ಸಂತಾಪ



















