ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮಾಹಿತಿ ಬೋರ್ಡ್‌ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರದ ಗೌತಮಪುರ ಸಮೀಪದ ಬೈರಾಪುರ ಗ್ರಾಮದಲ್ಲಿ ನಡೆದಿದೆ.
ಕೋಟೆಕೊಪ್ಪ ಗ್ರಾಮದ ನಿವಾಸಿ ರಮೇಶ್ (55) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ನಿನ್ನೆ ಸಂಜೆ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಸಂಚರಿಸುತ್ತಿದ್ದ ರಮೇಶ್, ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಬೋರ್ಡ್‌ಗೆ ಡಿಕ್ಕಿ ಹೊಡೆದಿದ್ದಾನೆ. ಗುದ್ದಿದ ತೀವ್ರತೆಗೆ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸದ್ಯ ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್.ಪಿ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಹಾಸನ | ಎರಡನೇ ಮದುವೆಯಾಗಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಪತ್ನಿಯನ್ನೇ ಕೊಂದ ಪಾಪಿ ಪತಿ



















