ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಭಯಾನಕ ಘಟನೆ ನಡೆದಿದೆ.
ಈ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಹತ್ತಿರ ನಡೆದಿದೆ. ತಾಲೂಕಿನ ಅವಲಗುರ್ಕಿ ಗ್ರಾಮದ ನಿತಿಶ್(17), ನಿತಿನ್(17) ಹಾಗೂ ವೈಭವ್ ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ.
ನಿತಿಶ್ ಹಾಗೂ ನಿತಿನ್ ಬಿಜಿಎಸ್ ಶಾಲೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರೆ, ವೈಭವ್ ಗುಡ್ ಶೆರ್ಡ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ. ಈ ಮೂವರ ಪ್ರತಿ ದಿನ ಟ್ಯೂಷನ್ ಗೆ ಹೋಗುತ್ತಿದ್ದರು ಎನ್ನಲಾಗಿದೆ.
ಎಂದಿನಂತೆ ಟ್ಯೂಷನ್ ಗೆ ಹೋಗಿ ಬರುವಾಗ ಈ ದುರ್ಘಟನೆ ನಡೆದಿದೆ. ಒಂದೇ ಬೈಕ್ ನಲ್ಲಿ ಮೂವರು ಬರುತ್ತಿದ್ದರು ಎನ್ನಲಾಗಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.