ತುಮಕೂರು: ಜಿಲ್ಲೆಯ ಮದಲೂರು ಗ್ರಾಮದಲ್ಲಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಗಳಿಯಿಂದ ಶಿರಾಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ಎಡವಟ್ಟಿನಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಬೈಕ್ ಬಸ್ ಕೆಳಗೆ ನುಗ್ಗಿದರೂ, ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಬೈಕ್ ಸವಾರರಿಬ್ಬರೂ ನೆರಲಗುಡ್ಡ ಗ್ರಾಮದವರು ಎಂಬ ಮಾಹಿತಿ ಲಭ್ಯವಾಗಿದೆ. ಅವರನ್ನು ತಕ್ಷಣವೇ ಶಿರ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಿರಾ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : 500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ : ಖತರ್ನಾಕ್ ದಂಪತಿ ಅರೆಸ್ಟ್


















