ಬೆಂಗಳೂರು: ಬೈಕ್ ಅಂಗಡಿಗಳು ಸುಟ್ಟು ಕರಕಲಾದ ಘಟನೆ ನಗರದ ಹಲಸೂರು ಮಾರಕುಟ್ಡೆಯಲ್ಲಿ ನಡೆದಿದೆ. ಇಂದು ಮುಂಜಾನೆ 3ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಇದು ಕಿಡಿಗೇಡಿಗಳ ಕೃತ್ಯ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸುಮಾರು 15ಕ್ಕೂ ಅಧಿಕ ಬೈಕ್ ಗಳು ಬೆಂಕಿಗಾಹುತಿಯಾಗಿದ್ದು ಹಾಗೂ ಒಂದು ತರಕಾರಿ ಅಂಗಡಿಯೂ ಸಹ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದು ಯಾರೋ ಉದ್ದೇಶಪೂರ್ವಕವಾಗಿ ಮಾಡಿರುವ ಕೃತ್ಯ ಎಂದು ಸ್ಥಳೀಯರು ಆರೋಪಿಸಿದ್ದಾರೆ.