ಬೆಂಗಳೂರು: ಬೈಕ್ ಶೋರೂಂಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 30ಕ್ಕೂ ಅಧಿಕ ಬೈಕ್ ಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರಾಜಕುಮಾರ್ ರಸ್ತೆಯಲ್ಲಿ ನಡೆದಿದೆ. ಶುಕ್ರ ಮೋಟರ್ಸ್ ಶೋರೂಂನಲ್ಲಿ ಈ ಘಟನೆ ನಡೆದಿದೆ. ಸೋಮವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಯತ್ನ ನಡೆಸಿದ್ದಾರೆ. ಮೂರು ಅಗ್ನಿ ಶಾಮಕ ವಾಹನಗಳಿಂದ ಅಗ್ನಿ ನಂದಿಸುವ ಕಾರ್ಯ ನಡೆಸಲಾಗುತ್ತಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿರುವ ಕುರಿತು ವರದಿಯಾಗಿಲ್ಲ.
ಕ್ವಾಲಿಟಿ ಇಲ್ಲದೆ ಇರುವ ಬ್ಯಾಟರಿಯಿಂದಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಈ ಶೋರೂಂನಲ್ಲಿ ವಕಿನೋವಾ ಕಂಪನಿಯ ಇವಿ ವೆಹಿಕಲ್ ಇದ್ದವು. ಘಟನೆಯಲ್ಲಿ ಸುಮಾರು 30ಕ್ಕೂ ಅಧಿಕ ಇವಿ ಸ್ಕೂಟರ್ ಭಸ್ಮವಾಗಿವೆ. ಚಾರ್ಜ್ ಹಾಕುವಾಗ ಶಾರ್ಟ್ ಸರ್ಕ್ಯೂಟ್ ಆಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.