ಬೆಂಗಳೂರು: ಬೈಕ್ ಶೋರೂಂಗೆ ಬೆಂಕಿ (Fire Accident)ಹೊತ್ತಿಕೊಂಡ ಪರಿಣಾಮ ಭಾರೀ ಪ್ರಮಾಣದ ನಷ್ಟ ಉಂಟಾಗಿರುವ ಘಟನೆಯೊಂದು ನಡೆದಿದೆ.
ಅವಘಡದಲ್ಲಿ 50ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಈ ಘಟನೆ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ. ಬುಧವಾರ ರಾತ್ರಿ 8 ಗಂಟೆಯ ವೇಳೆ ಈ ಅವಘಡ ಸಂಭವಿಸಿದೆ. ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದ ವೇಳೆ ಸೆಕ್ಯೂರಿಟಿ ಊಟಕ್ಕೆ ತೆರಳಿದ್ದರು. ಆಗ ಶೋರೂಂಗೆ ಬೆಂಕಿ ಹೊತ್ತಿಕೊಂಡಿದ್ದು, 50ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್ ಗೆ ಸಹ ಬೆಂಕಿ ತಗುಲಿದೆ.
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಸರ್ವಿಸ್ ಸೆಂಟರ್ ನಲ್ಲಿದ್ದ 20ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾಗಿವೆ. ಪಕ್ಕದಲ್ಲಿದ್ದ ಮತ್ತೊಂದು ಶೋರೂಂಗೂ ಬೆಂಕಿ ತಗುಲಿತ್ತು ಎನ್ನಲಾಗಿದೆ. ಆದರೆ, ಅಷ್ಟರಲ್ಲಿ ಅಲ್ಲಿದ್ದ ವಾಹನಗಳನ್ನು ಬೇರೆಡೆ ಶಿಫ್ಟ್ ಮಾಡಲಾಗಿದೆ. ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.