ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ಬೈಕ್ ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ಸಂಕಮ್ಮ ನಿಲಯದ ಬಳಿ ನಿಲ್ಲಿಸಿದ ಬೈಕ್ ಗಳು ಸುಟ್ಟು ಕರಕಲಾಗಿವೆ. ರಾತ್ರೋರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದು ಮೂರು ಬೈಕ್ ಗಳು ಕೂಡ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



















