ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಶಿವು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಕೊಲೆ ಮಾಡಲು ಆರೋಪಿಗಳು 1.5ಲಕ್ಷ ರೂ. ಸೂಪಾರಿ ಪಡೆದಿದ್ದರು ಎನ್ನಲಾಗಿದೆ. ಆರೋಪಿ ವಿಮಾಲ್ ನಿಂದ ನಾಲ್ವರು ಸುಪಾರಿ ಪಡೆದಿದ್ದರು ಎನ್ನಲಾಗಿದೆ. ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಸುಪಾರಿ ಪಡೆದಿರುವುದು ಬಹಿರಂಗವಾಗಿದೆ. ಅವಿನಾಶ್, ಸುಂದರ್ಶನ, ಮುರುಗೇಶ್, ನರಸಿಂಹ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.



















