ಬೆಂಗಳೂರು/ನವ ದೆಹಲಿ: ಬಿಲ್ಲು ಶಿವ ಕೊ*ಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಇಂದು (ಮಂಗಳವಾರ, ಆ.26) ಬಂಧಿಸಿದ್ದಾರೆ.
ಕೊ*ಲೆಯಾದ ಬಳಿಕ ತಲೆಮರೆಸಿಕೊಂಡಿದ್ದ ಜಗದೀಶ್ ಅಲಿಯಾಸ್ ಜಗ್ಗನನ್ನು ದೆಹಲಿಯಲ್ಲಿ ಸಿಐಡಿ ಅಧಿಕಾರಿಗಳ ವಿಶೇಷ ತಂಡ ಬಂಧಿಸಿದೆ. ಜಗದೀಶ್‌ನನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.
ರೌಡಿಶೀಟರ್ ಬಿಕ್ಲು ಶಿವ ಹ*ತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಜಗದೀಶ್ ಅಲಿಯಾಸ್ ಜಗ್ಗನ ವಿರುದ್ಧ ಬ್ಲೂಕಾರ್ನರ್ ನೋಟಿಸ್ ಹೊರಡಿಸಿದರೂ ಆರೋಪಿ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪರಾರಿಯಾಗುತ್ತಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ಜಗದೀಶ್ ದುಬೈನಿಂದ ಥೈಲ್ಯಾಂಡ್, ಬಳಿಕ ಇಂಡೋನೇಷಿಯಾ ಹೀಗೆ ಕಳೆದ ಒಂದು ತಿಂಗಳಲ್ಲಿ ನಾಲ್ಕು ದೇಶ ಸ್ಥಳಾಂತರವಾಗಿರುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮತ್ತೂಮ್ಮೆ ಇಂಟರ್‌ಪೋಲ್ ಅಧಿಕಾರಿಗಳನ್ನು ಸಂಪರ್ಕಿಸಿ ಆರೋಪಿಯನ್ನು ಆದಷ್ಟೇ ಬೇಗ ಬಂಧಿಸಿ ರಾಜ್ಯಕ್ಕೆ ಕರೆತರಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.



















