ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿಮಾಡಿದೆ. ಬಂಧನ ಭೀತಿ ಹೆಚ್ಚಾಗಿದ್ದು, ಯಾವುದೇ ಕ್ಷಣದಲ್ಲಿ ಅರೆಸ್ಟ್ ಮಾಡುವ ಸಾಧ್ಯತೆಯಿದೆ.
ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾಕ್ಕೆ ತೆರಳಿದ್ದು, ಅಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಐಡಿಯ 3 ತಂಡಗಳು ಅವರಿಗಾಗಿ 2-3 ರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ. ಈ ಮಧ್ಯೆ ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. ನಿರೀಕ್ಷಣಾ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಬೈರತಿ ಬಸವರಾಜ್‌ಗೆ ಕೋರ್ಟ್ ಶಾಕ್ ನೀಡಿದ್ದು, ಬಂಧನದ ಭೀತಿ ಮತ್ತಷ್ಟು ಹೆಚ್ಚಾಗಿದೆ.
ಸಿಐಡಿ ಅಧಿಕಾರಿಗಳ ಬಂಧನ ಭಯದ ನಡುವೆಯೇ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸೋದಾ ಅಥವಾ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಸೋದಾ ಅನ್ನೋದರ ಬಗ್ಗೆ ಚರ್ಚೆ ನಡೀತಿದೆ. ಈ ನಡುವೆ ಸಿಐಡಿ ಪೊಲೀಸರು ಬಂಧಿಸಲೇಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಾಚಣೆ ನಡೆಸಿದ್ದಾರೆ.
ಮಂಗಳವಾರ ಸಿಐಡಿ ಅಧಿಕಾರಿಗಳ ಬಂಧನ ಭಯದ ನಡುವೆಯೇ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸೋದಾ ಅಥವಾ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಸೋದಾ ಅನ್ನೋದರ ಬಗ್ಗೆ ಚರ್ಚೆ ನಡೀತಿದೆ. ಈ ನಡುವೆ ಸಿಐಡಿ ಪೊಲೀಸರು ಬಂಧಿಸಲೇಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಾಚಣೆ ನಡೆಸಿದ್ದಾರೆ.
ಇದನ್ನೂ ಓದಿ : ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ :1.8 ಲಕ್ಷ ರೂ.ವರೆಗೆ ಸಂಬಳ



















