ಬೆಂಗಳೂರು : ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಭಾರತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ ೭ಕ್ಕೆ ಏರಿಕೆಯಾಗಿದೆ.
ಅರುಣ್ ಮತ್ತು ನವೀನ್ ಬಂಧಿತರು. ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಿರಣ್, ವಿಮಲ್, ಪ್ರದೀಪ್, ಮದನ್ ಹಾಗೂ ಸ್ಯಾಮುವೆಲ್ ನನ್ನು ಈ ಹಿಂದೆ ಬಂಧಿಸಲಾಗಿತ್ತು.
ಪ್ರಕರಣದ ೫ನೇ ಆರೋಪಿಯಾಗಿರುವ ಕೆ. ಆರ್. ಪುರ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಬಸವರಾಜು ಅವರನ್ನು ಶನಿವಾರ ವಿಚಾರಣೆ ನಡೆಸಲಾಗಿತ್ತು. ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನಿಗಾಗಿ ತೀವ್ರ ಶೋಧ ನಡೆಸಿದ್ದಾರೆ.