ಬೆಂಗಳೂರು: ನೀವು ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿದ್ದೀರಾ? ನಿಮಗೆ ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡುವ ಆಸಕ್ತಿ ಇದೆಯೇ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಲಭಿಸಿದೆ. ಹೌದು, ಕೇಂದ್ರ ಸರ್ಕಾರಿ ಸ್ವಾಮ್ಯದ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (BIS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 23 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೆಕ್ಷನ್ ಆಫೀಸರ್ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್
ಒಟ್ಟು ಹುದ್ದೆಗಳು: 23
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 7
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸ್ನಾತಕೋತ್ತರ ಪದವಿ ಹಾಗೂ ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಬಿಐಎಸ್ ಅಧಿಸೂಚನೆ ಪ್ರಕಾರ, ಗರಿಷ್ಠ 56 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 44,900 ರೂ.ನಿಂದ 1.42 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು https://bis.gov.in/ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಕಳುಹಿಸಬೇಕಾದ ವಿಳಾಸ
Director (Establishment), Bureau of Indian Standards, Manak Bhavan, 9, Bahadur Shah Zafar Marg, New Delhi-110002
 
                                 
			 
			
 
                                 
                                


















