ಟೈಗರ್ ಶ್ರಾಫ್ ಮೇಲಿನ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಹೊತ್ತುಕೊಂಡಿದೆ. ಅನಿಲ್ ಪಂಡಿತ್ ಎಂಬುವನ ಹೆಸರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಆಡಿಯೋ ಬಿಡುಗಡೆ ಮಾಡಲಾಗಿದೆ. ನಟ ಸಲ್ಮಾನ್ ಖಾನ್ ಜೊತೆ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಈ ದಾಳಿ ನಡೆಸಲಾಗಿದೆ ಎಂದು ಆಡಿಯೋದಲ್ಲಿ ಹೇಳಲಾಗಿದೆ.
ಟೈಗರ್ ಶ್ರಾಫ್ ತಮ್ಮ ಗ್ಯಾಂಗ್ ನೀಡಿದ್ದ ಸೂಚನೆಗಳನ್ನು ಪಾಲಿಸುತ್ತಿರಲಿಲ್ಲ ಎಂದು ಆರೋಪಿಸಲಾಗಿದೆ. ಇಡೀ ಚಿತ್ರರಂಗಕ್ಕೆ ಈ ಮೂಲಕ ಬಿಷ್ಣೋಯಿ ಗ್ಯಾಂಗ್ ನೇರ ಎಚ್ಚರಿಕೆ ರವಾನಿಸಿದೆ. ಲಾರೆನ್ಸ್ ಬಿಷ್ಣೋಯ್ ಕಿರಿಯ ಸಹೋದರ ಎಂದು ಅನಿಲ್ ಪಂಡಿತ್ ತನ್ನನ್ನು ತಾನು ಪರಿಚಯಿಸಿಕೊಂಡಿದ್ದಾನೆ. ಸದ್ಯ ವೈರಲ್ ಆಗಿರುವ ಈ ಆಡಿಯೋದ ಸತ್ಯಾಸತ್ಯತೆಯನ್ನು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



















