ಚನ್ನಪಟ್ಟಣ: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕೊನೆಗೂ ಕಾಂಗ್ರೆಸ್ ನ ಸಿ.ಪಿ. ಯೋಗೇಶ್ವರ್ ಗೆದ್ದು ಬೀಗಿದ್ದಾರೆ. ಇದು ಜೆಡಿಎಸ್ ನ ಬೇಸರಕ್ಕೆ ಕಾರಣವಾಗಿದೆ. ಈ ಮಧ್ಯೆ ಗೆಲುವಿನ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಚನ್ನಪಟ್ಟಣ ಗೆಲುವಿಗೆ ಬಿಜೆಪಿ ಕೂಡ ಸಹಾಯ ಮಾಡಿತು ಎಂದು ಬಾಂಬ್ ಸಿಡಿಸಿದ್ದಾರೆ.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್ ಗೆಲುವಿಗೆ ಜೆಡಿಎಸ್, ಬಿಜೆಪಿಯವರು ಬೆಂಬಲಿಸಿದ್ದಾರೆ. ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಕೂಡ ಯೋಗೇಶ್ವರ್ ಗೆಲ್ಲುತ್ತಾರೆಂದು ಗೊತ್ತಿತ್ತು ಎಂದು ಹೇಳಇದ್ದಾರೆ. ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಗೆ ಕ್ಷೇತ್ರದಲ್ಲಿ ಕೇವಲ 16 ಸಾವಿರ ಮತಗಳು ಇದ್ದವು. ಆದರೆ, ಈಗ ನಮ್ಮ ಗೆಲುವಿನ ಅಂತರವೇ 25 ಸಾವಿರ ಆಗಿದೆ. ಬಿಜೆಪಿಯವರು ನಮಗೆ ಸಹಾಯ ಮಾಡದಿದ್ದರೆ, ಇಷ್ಟೊಂದು ಮತಗಳು ಬರುತ್ತಿರಲಿಲ್ಲ. ಹೀಗಾಗಿ ನಾನು ಬಿಜೆಪಿಯವರನ್ನು ಕೂಡ ಅಭಿನಂದಿಸುತ್ತೇನೆ ಎಂದಿದ್ದಾರೆ.