ಬೆಂಗಳೂರು: ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ ಮಂಗಳವಾರ ಸಂಜೆ 7ಕ್ಕೆ ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ ಕಮಿಟಿ (Core Committee) ಸಭೆಯಲ್ಲಿ ಶಾಸಕರು ಹಾಗೂ ಸಂಸದರ ಅಭಿಪ್ರಾಯ ಪಡೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರವಾಲ್, ತಮಿಳುನಾಡಿನಿಂದ ಪೊನ್ನು ರಾಧಾಕೃಷ್ಣನ್, (Ponnu Radhakrishnan) ರಾಜ್ಯದ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಆಗಮಿಸಲಿದ್ದಾರೆ. ಅಲ್ಲದೇ, ಮಂಗಳವಾರ ಮಧ್ಯಾಹ್ನ ಬಿಜೆಪಿ ಕಚೇರಿಯಲ್ಲಿ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ನಮ್ಮ ಚುನಾಯಿತ ಪ್ರತಿನಿಧಿಗಳ ಸಭೆ ನಡೆಯಲಿದೆ ಎಂದಿದ್ದಾರೆ.
ಪಕ್ಷದ ಚುನಾವಣಾ ಅಧಿಕಾರಿಗಳು, ಸಹ ಅಧಿಕಾರಿಗಳು, 13 ಜನ ಮೇಲ್ವಿಚಾರಕರ ಸಭೆಯೂ ನಡೆಯಲಿದೆ ಎಂದು ಮಾಹಿತಿ ನೀಡಿದ ಅವರು, ಈ 3 ಸಭೆಗಳಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಸಲಿದ್ದಾರೆ ಎದು ಹೇಳಿದ್ದಾರೆ.