ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಏರಿಕೆ ಮಾಡಿದೆ. ಈ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿವೆ. ಹೀಗಾಗಿ ಆರೋಪ- ಪ್ರತ್ಯಾರೋಪ ಹೆಚ್ಚಾಗುತ್ತಿವೆ.
ದರ ಏರಿಕೆಯ ಬಗ್ಗೆ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿಯವರು ಎಡಬಿಡಂಗಿಗಳು. ಅವರು ತಮ್ಮ ಎಡಬಿಡಂಗಿ ಮಾತುಗಳನ್ನು ಬಿಡಬೇಕು. ಎಲ್ಲೆಡೆ ಡೀಸೆಲ್ ಬೆಲೆ ಏರಿಕೆಯಾಗಿದೆ. ಹೀಗಾಗಿ ಅನಿವಾರ್ಯವಾಗಿ ಬೆಲೆ ಏರಿಕೆ ಮಾಡಲೇಬೇಕಾಗಿದೆ ಎಂದಿದ್ದಾರೆ.
ವಿಪಕ್ಷ ನಾಯಕ ಅಶೋಕ್ ಈ ಹಿಂದೆ ಸಾರಿಗೆ ಮಂತ್ರಿಯಾಗಿದ್ದಾಗ 5 ವರ್ಷದಲ್ಲಿ 7 ಬಾರಿ ಒಟ್ಟು 48 ಪರ್ಸೆಂಟ್ ಬಸ್ ದರ ಏರಿಕೆ ಮಾಡಿದ್ದಾರೆ. ಹೀಗಾಗಿ ಅವರಿಗೆ ದರ ಏರಿಕೆಯ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಗುಡುಗಿದ್ದಾರೆ.