ಬೆಂಗಳೂರು: ಬಿಜೆಪಿ ನಾಯಕರು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ (R Ashok) ಮಾತನಾಡಿ, ಈಗಾಗಲೇ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಬಿಜೆಪಿಗೆ ಮತ ಹಾಕಿದ ಶೇ. 75ರಷ್ಟು ಜನರು ಸದಸ್ಯರಾಗುವಂತೆ ನೋಡಿಕೊಳ್ಳಬೇಕು. ಬಿಜೆಪಿಗೆ ಶಕ್ತಿ ಇರುವುದೇ ಕಾರ್ಯಕರ್ತರಲ್ಲಿ. ಆದರೆ, ಕಾಂಗ್ರೆಸ್ ಶಕ್ತಿ ಗಾಂಧಿ ಕುಟುಂಬದಲ್ಲಿ ಇದೆ. ಅವರು ದೇಶ ಬಿಟ್ಟು ಹೋದರೆ, ಕಾಂಗ್ರೆಸ್ ಇಲ್ಲದಂತಾಗುತ್ತದೆ ಎಂದು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಲೀಡರ್ ಬೇಸ್ ಪಕ್ಷ. ಕಾಂಗ್ರೆಸ್ ನವರು 1 ರೂ. ನೀಡಿ ಸದಸ್ಯತ್ವ ಮಾಡಿಕೊಳ್ಳುತ್ತಿದ್ದರು. ಹೆಚ್ಚು ಸದಸ್ಯತ್ವ ಆಗಿದೆ ಎಂದು ತೋರಿಸಲು ಈ ತರಹ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
ಈ ವೇಳೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್, ಸಂಸದರಾದ ಪಿ.ಸಿ. ಮೋಹನ್, ಗೋವಿಂದ ಕಾರಜೋಳ , ಶಾಸಕ ಡಾ. ಅಶ್ವಥ್ ನಾರಾಯಣ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮತ್ತು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಸೇರಿದಂತೆ ಹಲವರು ಇದ್ದರು.