ಚೆನ್ನೈ: ಬಿಜೆಪಿ ನಾಯಕ ಅಣ್ಣಾಮಲೈ ಸೇರಿದಂತೆ ಬಿಜೆಪಿಯ ನಾಯರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಡಿಎಂಕೆ ಸರ್ಕಾರ ಬೆಂಬಲ ನೀಡಿದೆ ಎಂದು ಟೀಕಿಸಿ, ಪ್ರತಿಭಟನೆ ನಡೆಸುತ್ತಿದ್ದರಿಂದಾಗಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 1998 ರ ಕೊಯಮತ್ತೂರು ಬಾಂಬ್ ಸ್ಫೋಟದಲ್ಲಿ 58 ಜನರ ದುರಂತ ಸಾವಿಗೆ ಭಯೋತ್ಪಾದಕರ ವೈಭವೀಕರನ ಕಾರಣ ಎಂದು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.ಈ ವೇಳೆ ಪೊಲೀಸರು ನಾಯಕ ಅಣ್ಣಾಮಲೈ ಮತ್ತು ಇತರ ಬಿಜೆಪಿ ನಾಯಕರನ್ನು ಬಂಧಿಸಿದ್ದಾರೆ.
1998 ರ ಕೊಯಮತ್ತೂರು ಬಾಂಬ್ ಸ್ಫೋಟದಲ್ಲಿ 58 ಜನರ ದುರಂತ ಸಾವಿಗೆ ಕಾರಣವಾದ ಭಯೋತ್ಪಾದಕನನ್ನು ವೈಭವೀಕರಿಸುವುದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಲಾಗಿತ್ತು. ಅಣ್ಣಾಮಲೈ ಮತ್ತು ಇತರ ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.
ಸ್ಫೋಟದ ಮಾಸ್ಟರ್‌ಮೈಂಡ್ ಎಸ್‌ಎ ಬಾಷಾ ಅನಾರೋಗ್ಯದ ಹಿನ್ನೆಲೆ ಪೆರೋಲ್‌ನಲ್ಲಿ ಬಿಡುಗಡೆಯಾಗಿದ್ದ. ನಂತರ ಡಿ.17 ರಂದು ಮೃತಪಟ್ಟ. ಬಾಷಾ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ. ಆದರೆ, ಪರೋಲ್ ಮೇಲೆ ಹೊರ ಬಂದು, ಸಾವನ್ನಪ್ಪಿದ್ದ.