ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಖಾಸಗೀ ವ್ಯಕ್ತಿಗಳು ಹುಟ್ಟುಹಬ್ಬ ಆಚರಿಸಿಕೊಳ್ಳಲು ನಿಷೇಧವಿದ್ದರೂ, ನಿಯಮ ಉಲ್ಲಂಘಿಸಿ ಸರ್ಕಾರಿ ಶಾಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಮುನಿರಾಜು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯ ಕೊತ್ತಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುನಿರಾಜು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಮಕ್ಕಳ ರಕ್ಷಣಾ ನಿರ್ದೇಶನಾಲದಿಂದ ನಿಷೇದಾಜ್ಞೆ ಇದ್ದರೂ ಸರ್ಕಾರಿ ಶಾಲೆಗೆ ಬಂದು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.
ಶಾಲೆಯ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದ ಬಳಿಕ ಕೇಕ್ ಕತ್ತರಿಸಿ ನಿಯಮ ಉಲ್ಲಂಘನೆ ಮಾಡಿರುವ ಮುನಿರಾಜು ವರ್ತನೆಗೆ ವ್ಯಾಪಕ ಆಕ್ರೋಶ ಹೊರ ವ್ಯಕ್ತವಾಗುತ್ತಿದ್ದು, ಮುನಿರಾಜು ವಿರುದ್ದ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.