ಧಾರವಾಡ: ಬಿಜೆಪಿ ತಾಲೂಕಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯೊಬ್ಬರ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಮನೆಯಲ್ಲಿ ಈ ಘಟನೆ ನಡೆದಿದೆ. ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಕಲಾ ಮಸೂತಿ ಅವರ ಪತಿ ಈಶ್ವರ್ ಮಸೂತಿ (50)ನೇಣಿಗೆ ಶರಣಾಗಿದ್ದಾರೆ. ಶನಿವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೆ ಆರೋಗ್ಯ ಸಮಸ್ಯೆಯೇ ಕಾರಣ ಎಂದು ಶಂಕಿಸಲಾಗಿದೆ. ಈಶ್ವರ್ ಮಸೂತಿ ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆ ಇದ್ದಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈಶ್ವರ ಮಸೂತಿ ಅವರು ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕಿ ಸೀಮಾ ಮಸೂತಿ ಅವರ ಸಂಬಂಧಿಯಾಗಿದ್ದಾರೆ. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.