ಬೆಂಗಳೂರು : ಬಿಜೆಪಿ MLC ರವಿಕುಮಾರ್ ಅವರು ಸಿದ್ದರಾಮಯ್ಯ ಸರ್ಕಾರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಈ ನಡುವೆ ಇಂದು ರವಿಕುಮಾರ್ ಅವರು ಸಿಎಂ ಸಿದ್ದರಾಮಯ್ಯನವರ ಕಾರಿನಲ್ಲಿಯೇ ಪ್ರತ್ಯಕ್ಷರಾಗಿದ್ದಾರೆ.
ಹೌದು.. ಇಂದು ರವಿಕುಮಾರ್ ಅವರು ಸಿಎಂ ನಿವಾಸ ಕಾವೇರಿಯಿಂದ ವಿಧಾನಸೌಧಕ್ಕೆ ಸಿದ್ದರಾಮಯ್ಯನವರ ಕಾರಿನಲ್ಲೇ ಆಗಮಿಸಿದ್ದಾರೆ. ಸಿದ್ದರಾಮಯ್ಯನವರ ಹಿಂಬದಿಯಲ್ಲಿ ಕುಳಿತುಕೊಂಡು ಅವರೊಡನೆ ಆತ್ಮೀಯವಾಗಿ ಮಾತನಾಡುತ್ತ ವಿಧಾನಸೌಧಕ್ಕೆ ಬಂದಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.
ಸಾಮಾನ್ಯವಾಗಿ ಸಿದ್ದರಾಮಯ್ಯನವರ ಕಾರಿನಲ್ಲಿ ಸಚ್ಚೇತಕ ಅಶೋಕ್ ಪಟ್ಟಣ, ಸಚಿವರಾದ ಭೈರತಿ ಸುರೇಶ್ ಇಲ್ಲ ಜಮೀರ್ ಅಹಮದ್ ಖಾನ್ ಸೇರಿದಂತೆ ಇತರೆ ಕಾಂಗ್ರೆಸ್ ಪ್ರಮುಖ ನಾಯಕರು ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ. ಆದ್ರೆ, ಇಂದು ಕಾರಿನಲ್ಲಿ ರವಿಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೇ ಮಾತನಾಡುತ್ತಾ ಬಂದಿರುವುದು ಕುತೂಹಲ ಮೂಡಿಸಿದೆ.
ಇನ್ನು, ರವಿಕುಮಾರ್ ಸಿಎಂ ಸಿದ್ದರಾಮಯ್ಯನವರ ಕಾವೇರಿ ನಿವಾಸಕ್ಕೆ ಏಕೆ ಹೋಗಿದ್ದರು, ಹಾಗೇ ಅವರ ಕಾರಿನಲ್ಲೇ ವಿಧಾನಸೌಧಕ್ಕೆ ಆಗಮಿಸಿದ್ಯಾಕೆ ಎನ್ನುವ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ಇದನ್ನೂ ಓದಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಉಡುಪಿಗೆ ಭೇಟಿ



















