ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನ ಪಾತ್ರ ಬದಲಿಸುನ ಆಲೋಚನೆಯನ್ನು ವಿರೋಧ ಪಕ್ಷದ ಮೈತ್ರಿ ಅನ್ವೇಷಿಸುತ್ತಿವೆ ಎಂದು ಬಿಜೆಪಿ ಹೇಳಿಕೊಂಡಿದೆ.
ರಾಹುಲ್ ಗಾಂಧಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅವರು ಈ ಬದಲಾವಣೆಯನ್ನು ಮಾಡಬೇಕು ಎಂದು ಬಿಜೆಪಿ ಹೇಳಿದೆ. ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಬನ್ಸುರಿ ಸ್ವರಾಜ್, ವಿರೋಧ ಪಕ್ಷಗಳು ಬೇರೆ ಸಮರ್ಥ ನಾಯಕರನ್ನು ಆಯ್ಕೆ ಮಾಡಬಹುದು ಎಂದು ಹೇಳಿದ್ದಾರೆ.
ಇದು ಇಂಡಿಯಾ ಬ್ಲಾಕ್‌ನ “ಆಂತರಿಕ ವಿಷಯ” ಆಗಿರುವುದರಿಂದ ಅವರೇ ನಿರ್ಧಾರ ಕೈಗೊಳ್ಳಬೇಕು ಎಂದು ಕೂಡ ಹೇಳಿದ್ದಾರೆ. ಬಿಜೆಪಿಯ ಹೇಳಿಕೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದರೂ, ಪಿಟಿಐ ವರದಿ ಮಾಡಿದಂತೆ, ಕನಿಷ್ಠ ಶೇ. 10 ರಷ್ಟು ಸ್ಥಾನಗಳನ್ನು ಹೊಂದಿರುವ ಅತಿದೊಡ್ಡ ವಿರೋಧ ಪಕ್ಷದ ಸಂಸದರನ್ನು ಮಾತ್ರ ಎಲ್ ಒಪಿಯಾಗಿ ನೇಮಿಸಬಹುದು ಎಂದು ಹೇಳಲಾಗುತ್ತಿದೆ.
ಲೋಕಸಭೆಯಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ವಿರೋಧ ಪಕ್ಷವಾಗಿರುವುದರಿಂದ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಸರದಿಯಂತೆ ಮಾಡುವ ಸಾಧ್ಯತೆಯ ಕುರಿತು ವಿರೋಧ ಪಕ್ಷಗಳ ನಡುವೆ ನಡೆದ ಚರ್ಚೆಗಳ ಕುರಿತಾದ ಪ್ರಶ್ನೆಗಳಿಗೆ ಉತ್ತರವಾಗಿ ಬಿಜೆಪಿ ಸಂಸದರು ಈ ರೀತಿ ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕನ ಜವಾಬ್ದಾರಿಯನ್ನು ನಿಭಾಯಿಸಲು ಸಾಕಷ್ಟು ಸಮರ್ಥವಾಗಿರುವ ಅನೇಕ ನಾಯಕರು ಖಂಡಿತವಾಗಿಯೂ ವಿರೋಧ ಪಕ್ಷಗಳಲ್ಲಿದ್ದಾರೆ. ರಾಹುಲ್ ಗಾಂಧಿ ಅವರು ತಮ್ಮ ಜವಾಬ್ದಾರಿಯನ್ನು ಸಂಪೂರ್ಣ ಸಮರ್ಪಣಾಭಾವದಿಂದ ನಿಭಾಯಿಸಲು ಸಾಧ್ಯವಿಲ್ಲ ಎಂದು ಆ ಬಣ ಭಾವಿಸಿದರೆ, ಬದಲಾಯಿಸುವ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.