ಉಡುಪಿ/ಬೈಂದೂರು : ಇಂದು(ಶನಿವಾರ) ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಬೃಹತ್ ಪ್ರತಿಭಟನೆ ನೆಡೆಯಿತು.
ಕುಮ್ಕಿ ಹಕ್ಕು ಮತ್ತು ಕಂದಾಯ ಇಲಾಖೆಯಲ್ಲಿರುವ ರೈತರ ಕಡತಗಳ ಸಮಗ್ರ ವಿಲೇವಾರಿ ಹಾಗೂ ಪಟ್ಟಣ ಪಂಚಾಯಿತಿಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಬೈಂದೂರಿನ ತಾಲ್ಲೂಕಿನ ಬಿಜೆಪಿ ಕಾರ್ಯಾಲಯದಿಂದ ಬೈಕ್ ರ್ಯಾಲಿಯ ಮೂಲಕ ಪ್ರತಿಭಟನೆ ಆರಂಭವಾಯಿತು. ನಂತರ ತಾಲ್ಲೂಕು ಆಡಳಿತ ಸೌಧವನ್ನು ತಲುಪಿ ಪ್ರತಿಭಟನೆಯ ಆಗ್ರಹವಿರುವ ಪಟ್ಟಿಯನ್ನು ಮಾನ್ಯ ತಹಶೀಲ್ದಾರ್ ರವರಿಗೆ ಶಾಸಕರು ಹಸ್ತಾಂತರಿಸಿ, ತ್ವರಿತಗತಿಯಲ್ಲಿ ಜನರಿಗೆ ನ್ಯಾಯ ಒದಗಿಸುವಂತೆ ಈ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಇನ್ನು, ಪ್ರತಿಭಟನೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ಪಟ್ಟಣ ಪಂಚಾಯಿತಿ ವಿರುದ್ದದ ರೈತರ ಹೋರಾಟಕ್ಕೆ ಬೆಂಬಲವನ್ನು ಸೂಚಿಸಿದ್ದಾರೆ.



















