ಶ್ರೀನಗರ: ಅಲ್ಪಸಂಖ್ಯಾತರಿಗೆ ಮೀಸಲಾತಿ ಜಾರಿಗೊಳಿಸಲು ನಾವು ಎಂದಿಗೂ ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ನಿಮ್ಮ ಯಾವ ತಲೆಮಾರಿನವರು ಇನ್ನೂ ಮುಂದೆ ಮರಳಿ 370ನೇ ವಿಧಿ ತರಲು ಸಾಧ್ಯವಿಲ್ಲ. ನಾವು ಯಾವುದೇ ಕಾರಣಕ್ಕೂ ನಿಮ್ಮ ಕುತಂತ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಗುಡುಗಿದ್ದಾರೆ.
ಅಲ್ಲದೇ, ರಾಹುಲ್ ಗಾಂಧಿ ಸಂವಿಧಾನದ ನಕಲಿ ಪ್ರತಿಯನ್ನು ತೋರಿಸುವ ಮೂಲಕ ಅವಮಾನಿಸಿದ್ದಾರೆ ಮತ್ತು ಅಪಹಾಸ್ಯ ಮಾಡಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ. ಸಂವಿಧಾನವನ್ನು ಅಪಹಾಸ್ಯ ಮಾಡಬೇಡಿ. ಇದು ನಂಬಿಕೆಯ ಪ್ರಶ್ನೆಯಾಗಿದೆ. ಸಂವಿಧಾನದ ನಕಲಿ ಪ್ರತಿಯನ್ನು ತೋರಿಸುವ ಮೂಲಕ ಬಿ.ಆರ್ ಅಂಬೇಡ್ಕರ್ ಮತ್ತು ಸಂವಿಧಾನ ರಚನಾ ಸಭೆಗೆ ಅವಮಾನ ಮಾಡಿದ್ದೀರಿ ಎಂದು ಆರೋಪಿಸಿದ್ದಾರೆ.