ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಸ್ಥಾಯಿ ಸಮಿತಿಗೆ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು, ಆಪ್ ಗೆ ಮುಖಭಂಗವಾಗಿದೆ.
ಚುನಾವಣೆಯ ನಂತರ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯ ಸಿಂಗ್ 115 ಮತಗಳನ್ನು ಪಡೆದರೆ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ನಿರ್ಮಲಾ ಕುಮಾರಿ ಅವರು ಯಾವುದೇ ಮತ ಪಡೆಯಲಿಲ್ಲ. ಕಾಂಗ್ರೆಸ್ ಮತ್ತು ಎಎಪಿ ಚುನಾವಣೆಯನ್ನು ಬಹಿಷ್ಕರಿಸಿದ್ದವು. ಈ ಮೂಲಕ ಬಿಜೆಪಿ 10 ಸದಸ್ಯರನ್ನು ಹೊಂದಿದ್ದು, ಆಪ್ 8 ಸದಸ್ಯರನ್ನು ಹೊಂದಿದೆ.
ಚುನಾವಣೆಯ ನಂತರ ಬಿಜೆಪಿಯನ್ನು ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ಗೂಂಡಾಗಿರಿ ಮಾಡುತ್ತಿದೆ. “ನಿಯಮದ ಪ್ರಕಾರ, ಸಭೆಗೆ 72 ಗಂಟೆಗಳ ಮೊದಲು ಪ್ರತಿ ಕೌನ್ಸಿಲರ್ ಗೆ ನೋಟಿಸ್ ಕಳುಹಿಸಬೇಕು. ಆದರೆ ನಿಯಮವನ್ನು ಗಾಳಿಗೆ ತೂರಲಾಗಿದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.