ಆನೇಕಲ್: ವಿಡಿಯೋ ಪೋಸ್ಟ್ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಳ ಪರಿಶೀಲನೆ ಮಾಡಿದರು. ಈ ವೇಳೆ ಪ್ರವೀಣ್ ಸಹೋದರಿ ಸಾವಿಗೆ ನ್ಯಾಯ ಕೊಡಿಸಿ. ಪ್ರವೀಣ್ ಸಾವಿಗೆ ಕಾರಣರಾದವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಡಿಷನಲ್ ಎಸ್ಪಿ ನಾಗರಾಜ್, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕರಣ ದಾಖಲಾಗಿದೆ. ಪ್ರವೀಣ್ ಕುಟುಂಬಸ್ಥರು ಕೆಲವರ ಮೇಲೆ ದೂರು ಕೊಟ್ಟಿದ್ದಾರೆ. ಪ್ರವೀಣ್ ಗೆ ತೊಂದರೆ ಕೊಟ್ಟವರ ವಿರುದ್ಧ ದೂರು ನೀಡಿದ್ದಾರೆ. ಸುಮಾರು ಏಳೆಂಟು ಜನರ ವಿರುದ್ಧ ದೂರು ದಾಖಲಾಗಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಇಬ್ಬರ ಮಾಹಿತಿ ದೊರತಿದ್ದು, ಶೀಘ್ರದಲ್ಲಿ ಬಂಧಿಸುತ್ತೇವೆ ಎಂದಿದ್ದಾರೆ.
ಮೇಲ್ನೋಟಕ್ಕೆ ಹಣ ಮತ್ತು ಮಹಿಳೆ ವಿಚಾರ ಅಂತ ಹೇಳ್ತಾ ಇದ್ದಾರೆ. ತನಿಖೆಯ ನಂತರ ಸ್ಪಷ್ಟವಾಗಿ ಎಲ್ಲಾ ತಿಳಿದು ಬರಲಿದೆ. ಸೋಷಿಯಲ್ ಮಿಡಿಯಾ ಡೆತ್ ನೋಟ್ ನಲ್ಲಿ ಏನೆಲ್ಲಾ ಹೇಳಿದ್ದಾರೆ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ.