ಬೆಂಗಳೂರು: ಮುಂದಿನ ಕಾರ್ಯನೀತಿ, ಪಕ್ಷ ಸಂಘಟನೆ, ಚುನಾವಣಾ ತಯಾರಿ ಸಂಬಂಧ ಯಲಹಂಕದ ಖಾಸಗಿ ರೆಸಾರ್ಟ್‌ನಲ್ಲಿ ಸೆ. 18, 19 ರಂದು ರಾಜ್ಯ ಬಿಜೆಪಿ ಚಿಂತನ ಮಂಥನ ಸಭೆಯನ್ನು ಆಯೋಜಿಸಿದೆ.
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಎರಡು ದಿನಗಳ ಕಾಲ ನಡೆಯುವ ಈ ಸಭೆಯಲ್ಲಿ ಬಿಜೆಪಿಯ ಹಾಲಿ, ಮಾಜಿ ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು ಸೇರಿ ಒಟ್ಟು 400 ಅಪೇಕ್ಷಿತರು ಭಾಗಿಯಾಗಲಿದ್ದಾರೆ. ರಾಜ್ಯ ಬಿಜೆಪಿಯ ಮುಂದಿನ ಕಾರ್ಯ ನೀತಿ, ಪಕ್ಷ ಸಂಘಟನೆ, ಚುನಾವಣಾ ತಯಾರಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ, ಕಾಂಗ್ರೆಸ್ ಧೋರಣೆ, ಒಗ್ಗಟ್ಟು, ಸಮನ್ವಯತೆ ಕಾಯ್ದುಕೊಳ್ಳುವುದು ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.


















