ಧರ್ಮಸ್ಥಳ: ಬಿಜೆಪಿ ನಾಯಕರು ಧರ್ಮಸ್ಥಳದ ಜೊತೆ ನಾವು ಅಭಿಯಾನ ಕೈಗೊಂಡಿದ್ದು, ಹಲವಾರು ನಾಯಕರು ಭಾಗಿಯಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಚನ್ನಬಸಪ್ಪ, ವಿಪ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಲವಾರು ನಾಯಕರು ಧರ್ಮಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಇಂದು ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿರುವ ನಾಯಕರು ಇದೊಂದು ಕಾಂಗ್ರೆಸ್ ನ ಷಡ್ಯಂತ್ರ ಎಂದು ಪ್ರತಿಭಟನೆ ನಡೆಸಲಿದ್ದಾರೆ.



















