ಬೆಂಗಳೂರು: ಧರ್ಮಸ್ಥಳ ವಿರುದ್ಧ ಅಪಪ್ರಚಾರ, ಷಡ್ಯಂತ್ರ ಖಂಡಿಸಿ ವಿರೋಧ ಪಕ್ಷ ಬಿಜೆಪಿ ಇಂದಿನಿಂದ ಒಂದು ವಾರ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ.
ಮನೆ ಮನೆಗೆ ಧರ್ಮಯುದ್ದ ತಲುಪಿಸುವ ಉದ್ದೇಶದಿಂದ ಬಿಜೆಪಿ ಸಜ್ಜಾಗಿದೆ. ಧರ್ಮಸ್ಥಳ ಪ್ರಕರಣಕ್ಕೆ ಹಿಂದುತ್ವದ ಮೂಲಕ ರಾಜಕೀಯ ಲಾಭ ಪಡೆಯಲು ಕಮಲ ಪಡೆ ನಾಯಕರು ರಣತಂತ್ರ ರೂಪಿಸಿದ್ದಾರೆ. ಹಿಂದೂ ವಿರೋಧಿ ಕಾಂಗ್ರೆಸ್ ಎಂದು ಪ್ರತಿಭಟನೆ ನಡೆಸಲಿದೆ.
ಧರ್ಮಸ್ಥಳ ವಿರುದ್ಧದ ನಡೆಯುತ್ತಿರುವ ಅಪಪ್ರಚಾರಕ್ಕೆ ಕಡಿವಾಣ ಹಾಕುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಧರ್ಮಸ್ಥಳ ವಿರುದ್ಧ ಷಡ್ಯಂತ್ರದ ನಡೆಯುತ್ತಿರುವ ಅರಿವಿದ್ದರೂ ಸರ್ಕಾರ ಸೈಲೆಂಟ್ ಆಗಿದೆ. ಸದನದಲ್ಲೂ ಧರ್ಮಸ್ಥಳ ವಿಚಾರ ಪ್ರಸ್ತಾಪಿಸಿ ಚರ್ಚಿಸಲಾಗಿದ್ದು, ಇದೀಗ ಸದನದ ಹೊರಗೂ ಅಂದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಕಲ ರೀತಿಯಲ್ಲೂ ಸಜ್ಜಾಗಿದೆ.