ಇಡಿಯನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬಿಜೆಪಿಯವರ ವಿರುದ್ಧ ಯಾವುದೇ ಕೇಸ್ ಇಲ್ಲದಿರುವುದು, ನಮ್ಮ ವಿರುದ್ಧ ಮಾತ್ರ ದಾಖಲಾಗುತ್ತಿರುವುದು ಇದಕ್ಕೆ ಸಾಕ್ಷಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.
ರಾಮನಗರದ ಕೋಡಿಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ನನ್ನನ್ನು ತಿಹಾರ್ ಜೈಲಿಗೆ ಹಾಕಲಾಯಿತು. ಇದೀಗ ಆ ಕೇಸ್ ವಜಾ ಆಯ್ತು. ಅನುಭವಿಸುವವರಿಗೆ ಮಾತ್ರ ಅದು ಗೊತ್ತಾಗುತ್ತದೆ. ರಾಜಕೀಯ ಒತ್ತಡದ ಹಿನ್ನೆಲೆಯಲ್ಲಿ ಇಡಿ ಇಂತಹ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.