ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಮಹಿಳೆಯಿಂದ ಬ್ಲ್ಯಾಕ್ ಮೇಲ್ ಪ್ರಕರಣ ಸಂಬಂಧ ಬೆಂಗಳೂರು ಸಿಸಿಬಿ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.
ಚಿಕ್ಕಮಗಳೂರು ಮೂಲದ ಸ್ಪೂರ್ತಿ ಬಂಧಿತ ಆರೋಪಿ. ಸ್ವಾಮೀಜಿಗೆ 1 ಕೋಟಿ ರೂ. ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಆರೋಪಿ ಸ್ಪೂರ್ತಿ ಸ್ವಾಮಿಜಿಯಿಂದ 4.5 ಲಕ್ಷ ರೂ. ವಸೂಲಿ ಮಾಡಿ ಮತ್ತೆ 1 ಕೋಟಿ ಬೇಡಿಕೆ ಇಟ್ಟಿದ್ದಾಳೆ ಎಂದು ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದಾರೆ. ಈ ಸಂಬಂಧ ತನಿಖೆ ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು ಆರೋಪಿ ಸ್ಪೂರ್ತಿ ಎಂಬಾಕೆಯನ್ನು ಬಂಧಿಸಿದ್ದಾರೆ.
5 ತಿಂಗಳ ಹಿಂದೆ ರುದ್ರಮಿನಿ ಸ್ವಾಮೀಜಿಗೆ ಕರೆ ಮಾಡಿದ್ದ ಮಹಿಳೆ, ನಾನು ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೀನಿ ಎಂದು ಪರಿಚಯ ಮಾಡಿಕೊಂಡಿದ್ದಳು. ಬಳಿಕ ಸ್ವಾಮೀಜಿಯ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಹಣ ಕೊಡದಿದ್ದರೆ ಮಾನ ಹರಾಜು ಹಾಕುವುದಾಗಿಯೂ ಹಾಗೂ ಜೀವ ಬೆದರಿಕೆ ಹಾಕಿ ಬೆಂಗಳೂರಿಗೆ ಬಂದಾಗ 4.5 ಲಕ್ಷ ರೂ. ವಸೂಲಿ ಮಾಡಿದ್ದಳು ಎನ್ನಲಾಗುತ್ತಿದೆ.
ನಂತರ ತನ್ನ ಸಹಚರರ ಜೊತೆ ಸೇರಿ 1 ಕೋಟಿ ರೂ. ಕೊಡಬೇಕೆಂದು ಬೆದರಿಕೆ ಹಾಕಿದ್ದಾಳೆ ಎಂದು ಆರೋಪಿಸಲಾಗಿದೆ. ಹೀಗಾಗಿ ಮಠದ ಸ್ವಾಮೀಜಿ ಸಿಸಿಬಿ ಮೊರೆ ಹೋಗಿದ್ದಾರೆ. ಸದ್ಯ ಆರೋಪಿ ಸ್ಪೂರ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಕೇಸ್ ದಾಖಲು ಮಾಡಿ ಕೋರ್ಟ್ ಮೊರೆ ಹೋಗಿರುವ ಸ್ವಾಮೀಜಿ ತನಗೆ ಸಂಬಂಧಪಟ್ಟ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ.
ಇದನ್ನೂ ಓದಿ; ಸಾಲು ಸಾಲು ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ | ಇನ್ಮುಂದೆ ಸ್ಲೀಪರ್ ಬಸ್‌ಗಳಿಗೆ 8 ನಿಯಮ ಪಾಲನೆ ಕಡ್ಡಾಯ



















