ಬೆಂಗಳೂರು : ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (BMCRI Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ನರ್ಸಿಂಗ್ ಸ್ಟಾಫ್ ಅಥವಾ ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಗಳ ಹೆಸರು: ನರ್ಸಿಂಗ್ ಸ್ಟಾಫ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 22
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಎಸ್ಸಿ ನರ್ಸಿಂಗ್ ಕೋರ್ಸ್ ಮುಗಿಸಿರಬೇಕು. ಹಾಗೆಯೇ, ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೋಂದಣಿ ಮಾಡಿಕೊಂಡಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 18 ವರ್ಷ ತುಂಬಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಇರುವುದಿಲ್ಲ. ನೇರ ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸುವವರು ಮೊದಲಿಗೆ https://bmcribengaluru.karnataka.gov.in/en ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಕೆಳಗೆ ನಮೂದಿಸಿರುವ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಪೋಸ್ಟ್ ಮಾಡಬೇಕು. ನಂತರ ಜುಲೈ 29ರಂದು ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
ನಿರ್ದೇಶಕರು ಹಾಗೂ ಡೀನ್ ಅವರ ಸಭಾ ಕೊಠಡಿ
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ
ಕೆ.ಆರ್.ರಸ್ತೆ, ಬೆಂಗಳೂರು-560002
ಇದನ್ನೂ ಓದಿ : ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!



















