ಬೆಂಗಳೂರು : ಬೆಂಗಳೂರಿನಲ್ಲೇ ಲಕ್ಷಾಂತರ ರೂಪಾಯಿ ಸಂಬಳದ ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ನಮ್ಮ ಮೆಟ್ರೋದಲ್ಲಿ (ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ- BMRCL) ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಡೆಪ್ಯೂಟಿ ಚೀಫ್ ಎಂಜಿನಿಯರ್ ಹಾಗೂ ಕಂಪನಿ ಸೆಕ್ರೆಟರಿ ಹುದ್ದೆಗಳನ್ನು ಭರ್ತಿ (BMRCL Recruitment 2026) ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಹಾಗೂ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
ಹುದ್ದೆಗಳ ಹೆಸರು: ಡೆಪ್ಯೂಟಿ ಚೀಫ್ ಎಂಜಿನಿಯರ್ ಹಾಗೂ ಕಂಪನಿ ಸೆಕ್ರೆಟರಿ
ಒಟ್ಟು ಹುದ್ದೆಗಳು: 2
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್ ಅಥವಾ ಆನ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 30
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.04 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು bmrc.co.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಳಾಸ
ಮಹಾಪ್ರಬಂಧಕರು (ಮಾನವ ಸಂಪನ್ಮೂಲ)
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL),
3ನೇ ಮಹಡಿ, ಬಿ.ಎಂ.ಟಿ.ಸಿ. ಸಂಕೀರ್ಣ, ಕೆ.ಎಚ್. ರಸ್ತೆ,
ಶಾಂತಿನಗರ, ಬೆಂಗಳೂರು – 560027.
ಇದನ್ನೂ ಓದಿ : ಇಂಧನ ಕ್ರಾಂತಿಗೆ ಮಾರುತಿ ಸುಜುಕಿ ಸಜ್ಜು : E-85 ಫ್ಲೆಕ್ಸ್-ಫ್ಯೂಯೆಲ್ ಬೆಂಬಲಿಸುವ 3 ಕಾರು ಶೀಘ್ರ ಮಾರುಕಟ್ಟೆಗೆ!



















