ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಲಕ್ಷಾಂತರ ರೂಪಾಯಿ ಸಂಬಳದ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ನಮ್ಮ ಮೆಟ್ರೋದಲ್ಲಿ (ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ- BMRCL) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಡೆಪ್ಯೂಟಿ ಜನರಲ್ ಮ್ಯಾನೇಜರ್ (BMRCL Recruitment 2026) ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಹಾಗೂ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
ಹುದ್ದೆಗಳ ಹೆಸರು: ಡೆಪ್ಯೂಟಿ ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳು: 1
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್ ಅಥವಾ ಆನ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 10
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.64 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು bmrc.co.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಳಾಸ
The General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru 560027. (ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರಿಗೆ ಆಗಸ್ಟ್ 13ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ)
ಇದನ್ನೂ ಓದಿ : ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ



















