ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಲಕ್ಷಾಂತರ ರೂಪಾಯಿ ಸಂಬಳದ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ನಮ್ಮ ಮೆಟ್ರೋದಲ್ಲಿ (ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ- BMRCL) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜನರಲ್ ಮ್ಯಾನೇಜರ್ (BMRCL Recruitment 2026) ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಹಾಗೂ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
ಹುದ್ದೆಗಳ ಹೆಸರು: ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳು: 1
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್ ಅಥವಾ ಆನ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 15
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಮಾನವ ಸಂಪನ್ಮೂಲ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.06 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು https://projectrecruit.bmrc.co.in/frmApplFillTab.aspx?ND=118 ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಳಾಸ
The Executive Director (HR) Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru 560027. (ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರಿಗೆ ಆಗಸ್ಟ್ 13ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ)


















